
ಬೆಂಗಳೂರು, ಮಾ.5-ರೈಲು ಬರುತ್ತಿರುವುದನ್ನು ಗಮನಿಸದೆ ಹಳಿ ದಾಟಲು ಮುಂದಾದ ಬಿಹಾರಿ ಮೂಲದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎ.ಪ್ಯಾನಲ್-ಕಾರ್ಮಲ್ ರಾಮ್ ರೈಲ್ವೆ ನಿಲ್ದಾಣದ ಮಧ್ಯೆ ಹಾದುಹೋಗುವ ಹಳಿ ದಾಟುತ್ತಿದ್ದ ಸುಮಾರು 35 ವರ್ಷದ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಈತನ ಹೆಸರು, ವಿಳಾಸ ತಿಳಿದುಬಂದಿಲ್ಲ.
ಮನೆಗೆ ರೇಷನ್ ತೆಗೆದುಕೊಂಡು ಹಳಿ ದಾಟುವಾಗ ಈ ದುರ್ಘಟನೆ ನಡೆದಿದೆ.
ಬೈಯ್ಯಪ್ಪನಹಳ್ಳಿ ರೈಲ್ವೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.