ಬೆಂಗಳೂರು, ಮಾ.5- ಒಂಟಿತನದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉತ್ತರಪ್ರದೇಶದ ನಿವಾಸಿಯೊಬ್ಬರು ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಉತ್ತರ ಪ್ರದೇಶದ ಅನಿಲ್ ಔಜಾ (54) ಆತ್ಮಹತ್ಯೆಗೆ ಶರಣಾದ ದುರ್ದೈವಿ.
ನಗರದ ಪಾಪಯ್ಯ ಲೇ ಔಟ್ನ ಹೈಲೆಟ್ ಅಪಾರ್ಟ್ಮೆಂಟ್ನಲ್ಲಿ ಅನಿಲ್ ಔಜಾ ವಾಸವಾಗಿದ್ದರು. ಕಾರು ಸರ್ವೀಸ್ ಸ್ಟೇಷನ್ ಹೊಂದಿದ್ದ ಇವರು ಆಟೋ ಮೊಬೈಲ್ ಬ್ಯುಸಿನೆಸ್ ಮಾಡುತ್ತಿದ್ದರು.
ಪತ್ನಿ ವಿಚ್ಛೇದನ ನೀಡಿದ್ದರಿಂದ ಅನಿಲ್ ಔಜಾ ಅವರು ಒಬ್ಬರೇ ವಾಸವಾಗಿದ್ದರು. ಒಂಟಿತನದಿಂದ ನೊಂದಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.
ರಾತ್ರಿ 9 ರಿಂದ 9.30ರ ಸಮಯದಲ್ಲಿ ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಅನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ನೆರೆಹೊರೆಯ ನಿವಾಸಿಗಳು ಇವರ ಮನೆಯ ಬಳಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ತಕ್ಷಣ ಪೆÇಲೀಸರಿಗೆ ವಿಷಯ ತಿಳಿಸಿದ್ದು , ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.