ಪಾಂಡವಪುರ, ಮಾ.5- ಖಾಸಗಿ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ ನಡೆಸಿ ಅಂಗನವಾಡಿಗೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ.
ಅಂಗನವಾಡಿ ಮಕ್ಕಳಿಗೆ ಸರಬರಾಜು ಮಾಡಬೇಕಿದ್ದ 140 ಮೂಟೆ ಅಕ್ಕಿ, 200 ಮೂಟೆ ಸಕ್ಕರೆ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಪಟ್ಟಣದ ಖಾಸಗಿ ಗೋದಾಮೊಂದರಲ್ಲಿ ದಾಸ್ತಾನು ಮಾಡಲಾಗಿತ್ತು.
ಇದರ ಬಗ್ಗೆ ನಿಖರ ಮಾಹಿತಿ ಪಡೆದ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಆಹಾರ ಪದಾರ್ಥಗಳ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು ಪರಿಶೀಲಿಸಿ ವಿವರ ಒದಗಿಸಲಾಗುವುದು ಎಂದು ತಿಳಿಸಿದರು. ದಾಳಿಯ ವೇಳೆ ತಹಸೀಲ್ದಾರ್ ಹನುಮಂತರಾಯಪ್ಪ, ಆಹಾರ ಶಿರಸ್ತೇದಾರ್ ಮಂಜುನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.