ಮಂಡ್ಯ, ಮಾ.5- ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು ಬೆಳಗುಲ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಗ್ರಾಮದ ಮರಿಗೌಡ ಎಂಬುವರಿಗೆ ಸೇರಿದ ಭತ್ತದ ಹುಲ್ಲನ್ನು ಮನೆಯ ಕೂಗಳತೆ ದೂರದಲ್ಲಿದ್ದ ಹಿತ್ತಲಿನಲ್ಲಿ ಮೆದೆ ಹಾಕಿದ್ದರು. ಇದಕ್ಕೆ ಬಂಕಿ ಹೊತ್ತಿಕೊಂಡ ಬಗ್ಗೆ ಗ್ರಾಮಸ್ಥರು ಗಮನಿಸಿ ಮಾಲೀಕರಿಗೆ ತಿಳಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರೂ ಆ ವೇಳೆಗೆ ಭತ್ತದ ಮೆದೆ ಸಂಪೂರ್ಣ ಸುಟ್ಟು ಹೋಗಿತ್ತು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆ.ಆರ್.ಎಸ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ