ಚಂಡಿಗಢ, ಮಾ.6-ಟ್ರಕ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಲ್ಲಿ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸುಟ್ಟು ಕರಕಲಾಗಿರುವ ಭೀಕರ ಘಟನೆ ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ದೆಹಲಿಯಿಂದ ಕುಟುಂಬ ಸದಸ್ಯರು ಕಾರಿನಲ್ಲಿ ತೆರಳುತ್ತಿದ್ದಾಗ ಶಾಮ್ಗಢ್ ಗ್ರಾಮದ ಬಳಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದಿಂದ ಜಿಗಿದು ಎದುರ ದಿಕ್ಕಿನಿಂದ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆಯಿತು.
ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿತು. ಈ ದುರಂತದಲ್ಲಿ ಹಸುಳೆ ಸೇರಿ ನಾಲ್ವರು ಜೀವಂತ ದಹನಗೊಂಡರು ಎಂದು ಪೆÇಲೀಸರು ತಿಳಿಸಿದ್ದಾರೆ.