ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ: ಭಾರತೀಯ ಬಹುಜನ ಕ್ರಾಂತಿದಳ ಒತ್ತಾಯ
ಬೆಂಗಳೂರು ಮಾ.6-ರಾಜ್ಯ ರೈತರ ಸಮಸ್ಯೆ ನಿವಾರಿಸುವಂತೆ ಭಾರತೀಯ ಬಹುಜನ ಕ್ರಾಂತಿದಳ ರಾಜ್ಯಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾಷನಲ್ ಪ್ರೆಸಿಡೆಂಟ್ ರಾಥೋಡ್, ರಾಜ್ಯ ರೈತರ ಸಮಸ್ಯೆಗಳನ್ನು ಇತ್ಯರ್ಥಪಡಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ಕೂಡಲೇ ಸಮಸ್ಯೆಗಳನ್ನು ನಿವಾರಿಸಬೇಕೆಂದು ಬಿಬಿಕೆಡಿ ಒತ್ತಾಯಿಸಿದೆ.
ರೈತರ ಸಾಲ ಮನ್ನಾ ಮಾಡಬೇಕು, 24 ಗಂಟೆಗಳ ಕಾಲ ವಿದ್ಯುತ್ ಒದಗಿಸಬೇಕು, ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ದರ ನಿಗದಿಪಡಿಸಬೇಕು. ಕೃಷಿ ಕ್ಷೇತ್ರವನ್ನು ಕೈಗಾರಿಕಾ ಕ್ಷೇತ್ರವನ್ನಾಗಿ ಮಾರ್ಪಾಡು ಮಾಡಬೇಕು ಸೇರಿದಂತೆ ಮತ್ತಿತರ ಸಮಸ್ಯೆಗಳು ಈಡೇರಿಸಬೇಕೆಂದು ಒತ್ತಾಯಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉದ್ಯೋಗಾವಕಾಶ ಸೃಷ್ಟಿ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.