ಆನೇಕಲ್, ಮಾ.6- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಧೂಳಿಪಟವಾಗಲಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.
ಜೆ.ಪಿ.ನಗರದ ನಿವಾಸದಲ್ಲಿ ಆರ್.ಪ್ರಭಾಕರ್ ರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ಮುಖ್ಯ ಮಂತ್ರಿ ಸಿದ್ದರಾಮಯ್ಯರವರು ಜೆಡಿಎಸ್ ಪಕ್ಷದ ಬಗ್ಗೆ ಹುಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಈವತ್ತಿನ ತಮ್ಮ ಬೆಳವಣಿಗೆಗೆ ಜೆಡಿಎಸ್ ಪಕ್ಷವೆಂಬುದನ್ನು ಅರಿತು ಮಾತನಾಡಿ ಎಂದರು.
ಮುಖ್ಯ ಮಂತ್ರಿಯಾಗಿ 20 ತಿಂಗಳ ಆಡಳಿತ ನಡೆಸಿದ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದು, ಈ ಬಾರಿ ಬೆಂಗಳೂರು ನಗರ ಜನತೆ ಸೇರಿದಂತೆ ಇಡೀ ರಾಜ್ಯದ ಜನತೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಭರವಸೆ ವ್ಯಕ್ತ ಪಡಿಸಿದರು.
ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜಣ್ಣ ಮತ್ತಿತರರು ಈ ಸಂದರ್ಭದಲ್ಲಿದ್ದರು.