ಬೆಂಗಳೂರು:ಮಾ-6: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ಯಲ್ಲಿ ಒಡಕು ಆರಂಭವಾಗಿರುವ ಹಿನ್ನಲೆಯಲ್ಲಿ ಕೆಪಿಜೆಪಿಯ ಮುಖ್ಯಸ್ಥ, ನಾಯಕ ನಟ ಉಪೇಂದ್ರ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಕೆಪಿಜೆಪಿಯ ಮುಖ್ಯಸ್ಥ, ನಟ ಉಪೇಂದ್ರ ಹಾಗೂ ಪಕ್ಷದ ಸಂಸ್ಥಾಪಕ ಮತ್ತು ಮುಖ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಗೌಡ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು ನಟ ಉಪೇಂದ್ರ ಕೆಪಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬರುವ ಮೂಲಕ ಪ್ರಜಾಕೀಯ ಎಂಬ ಹೊಸ ಪಕ್ಷ ಸ್ಥಾಪಿಸುವುದಾಗಿ ತಮ್ಮ ರಾಜಕೀಯ ಮುಂದಿನ ನಡೆ ಪ್ರಕಟಿಸಿದ್ದಾರೆ.
ರುಪ್ಪೀಸ್ ರೆಸಾರ್ಟ್ನಲ್ಲಿ ಉಪೇಂದ್ರ ಸಭೆ ನಡೆಸಿದ್ದು, ಸಭೆಯಲ್ಲಿ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಸಾಧ್ಯವಾದರೆ ವಿಧಾನಸಭಾ ಚುನಾವಣೆಯಲ್ಲಿ ಕೂಡ ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಸಿರುವುದಾಗಿ ಸ್ವತ: ಉಪೇಂದ್ರ ತಿಳಿಸಿದ್ದಾರೆ.
Kannada actor Upendra,KPJP,Goodbye