ಅಗರ್ತಲಾ, ಮಾ.6-ತ್ರಿಪುರ ಬಿಜೆಪಿ ಅಧ್ಯಕ್ಷ ಹಾಗೂ ನೂತನ ಚುನಾಯಿತ ಶಾಸಕ ಬಿಪ್ಲವ್ ಕುಮಾರ್ ದೇಬ್ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ. ಇದರೊಂದಿಗೆ ಈಶಾನ್ಯ ರಾಜ್ಯ ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಅವರು ಪದಗ್ರಹಣ ಮಾಡಲಿದ್ದಾರೆ.
ರಾಜಧಾನಿ ಅಗರ್ತಲಾದಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅವರು ತ್ರಿಪುರದ ಹೊಸ ಸಿಎಂ ಆಗಲಿದ್ದಾರೆ ಎಂದು ಗಡ್ಕರಿ ಹೇಳಿದರು.