ಬೆಂಗಳೂರು, ಮಾ.6- ಕೆಪಿಜೆಪಿ ಬಿಟ್ಟಿರುವ ನಟ ಉಪೇಂದ್ರ ಅವರು ಜೆಡಿಎಸ್ಗೆ ಬರುವುದಾದರೆ ನಾವು ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ವಿಕಾಸಪರ್ವ ಪಾದಯಾತ್ರೆಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ತತ್ವ-ಸಿದ್ಧಾಂತ ಒಪ್ಪಿ ಉಪೇಂದ್ರ ಸೇರಿದಂತೆ ಯಾರೇ ಬಂದರೂ ಅವರಿಗೆ ಸ್ವಾಗತವಿದೆ ಎಂದು ತಿಳಿಸಿದರು.