ಮೈಸೂರು, ಮಾ.7- ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಜೆ.ಪಿ.ನಗರದ ವಾಸಿ ಶ್ರೀಕಾಂತ್ (19), ವಿಜೇಂದ್ರ (19) ಇನ್ನಿಬ್ಬರು ಅಪ್ರಾಪ್ತರು ಬಂಧಿತರಾಗಿದ್ದಾರೆ.
ಬಂಧಿತರಿಂದ ಪೆÇಲೀಸರು 10 ಲಕ್ಷ ರೂ. ಬೆಲೆಯ 350 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಜೆ.ಪಿ.ನಗರದ ವಾಸಿ ಕೃಷಿ ಇಲಾಖೆ ಅಧಿಕಾರಿ ವೆಂಕಟೇಶ್ ಎಂಬುವರು ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದಾಗ ಫೆ.26 ರಂದು ಇವರ ಮನೆಯಲ್ಲಿ ಆರೋಪಿಗಳು ಕಳವು ಮಾಡಿದ್ದರು.
ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ವಿದ್ಯಾರಣ್ಯಪುರ ಠಾಣೆ ಇನ್ಸ್ಪೆಕ್ಟರ್ ಓಂಕಾರಪ್ಪ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.