ಚೆನ್ನೈ : ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವ ಘಟನೆ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ತಮಿಳುನಾಡಿನಲ್ಲಿರುವ ಪೆರಿಯಾರ್ ಮೂರ್ತಿಗೆ ಹಾನಿ ಮಾಡಿರುವ ಘಟನೆಗೆ ಪ್ರತಿಯಾಗಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರಬಹುದೆಂದು ಅಂದಾಜಿಸಲಾಗಿದೆ.
ಬಾಂಬ್ ದಾಳಿ ನಡೆಸಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಓರ್ವ ಸಿಪಿಐ ಕಾರ್ಯಕರ್ತನನ್ನುಬಂಧಿಸಲಾಗಿದೆ. ಇನ್ನು ಪೆರಿಯಾರ್ ಮೂರ್ತಿಗೆ ಹಾನಿ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.