ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಮಕೃಷ್ಣ ನಗರದ ಇ ಅಂಡ್ ಎಫ್ ಬ್ಲಾಕ್ 3ನೇ ಕ್ರಾಸ್ ವಾಸಿ ಗಾಯತ್ರಿ ಎಂಬುವರ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯತ್ರಿ ಅವರ ಪುತ್ರ ಹರೀಶ್ ಖಾಸಗಿ ವಾಹಿನಿಯೊಂದರಲ್ಲಿ ಕ್ಯಾಮೆರಾಮೆನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.