ದಾವಣಗೆರೆ,ಮಾ.7-ಹರಿಹರ ತಾಲ್ಲೂಕಿನ ಹಾಲಿವಾಣ ಗ್ರಾಮದ ಪ್ರಗತಿಪರ ರೈತ ಬರಮನಗೌಡ (53)ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ ಹಾಗೂ ಪತ್ನಿಯನ್ನು ಅಗಲಿದ್ದು, ಅಪಾರ ಬಂಧುಮಿತ್ರರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.