ಬೆಂಗಳೂರು,ಮಾ.7-ಗ್ಯಾರೇಜ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.
ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳನ್ನು ಸಲ್ಲಿಸಲಾಗಿತ್ತು.
ತಡರಾತ್ರಿ ಈ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದ ಜೆಸಿನಗರ ಠಾಣೆ ಪೆÇಲೀಸರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯಿಂದಾಗಿ ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಕಾರು ಹಾಗೂ ಬೈಕ್ಗಳು ಹಾನಿಗೀಡಾಗಿವೆ.
ಜೆಸಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.