ಪ್ರತಿಮೆ ಧ್ವಂಸಗೊಳಿಸಿರುವ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ವಿರೋಧ

ನವದೆಹಲಿ,ಮಾ.7-ತ್ರಿಪುರದಲ್ಲಿ ಕಮ್ಯೂನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆಗಳು ಹಾಗೂ ತಮಿಳುನಾಡಿನಲ್ಲಿ ದ್ರಾವಿಡ ಮುಖಂಡ ಪೆರಿಯಾರ್ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯವೂ ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ರಾಜ್ಯ ಸರ್ಕಾರಗಳು ಮುಂದೆ ಇಂತಹ ಘಟನೆಗಳು ಪರಿವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಯಾರು ಇಂತಹ ಕೃತ್ಯ ಎಸಗುತ್ತಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಪ್ರತಿಮೆ ದ್ವಂಸಗಳ ಘಟನೆಯನ್ನು ದುರದೃಷ್ಟಕರ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ಕೃತ್ಯ ಎಸಗಿರುವ ಯಾರೇ ಆಗಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ತಮಿಳುನಾಡಿನ ಬಿಜೆಪಿ ನಾಯಕ ಎಚ್. ರಾಜಾ, ಮುಂದಿನ ಗುರಿ ರಾಜ್ಯದ ಕ್ರಾಂತಿಕಾರಿ ನಾಯಕ ಇ.ವಿ. ರಾಮಸ್ವಾಮಿ ಪೆರಿಯಾರ್ ಎಂದು ಪೇಸ್‍ಬುಕ್ ಪೆÇೀಸ್ಟ್‍ನಲ್ಲಿ ಬರೆದ ಬರಹಕ್ಕೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದವು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿರುವ ರಾಜಾ ಕ್ಷಮೆ ಕೋರಿದ್ದು, ತಮ್ಮ ಪೆÇೀಸ್ಟನ್ನು ಡಿಲಿಟ್ ಮಾಡಿದ್ದರು.
ಪಶ್ಚಿಮ ಬಂಗಾಳದಲ್ಲೂ ವಿಗ್ರಹ ಧ್ವಂಸ:
ತ್ರಿಪುರದಲ್ಲಿ ಲೆನಿನ್, ತಮಿಳುನಾಡಿನಲ್ಲಿ ಪೆರಿಯಾರ್ ವಿಗ್ರಹ ಧ್ವಂಸ ಪ್ರಕರಣ ನಡೆದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಕೋಲ್ಕತ್ತದ ಕಾಲಿಘಾಟ್‍ನಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್‍ಪ್ರಸಾದ್ ಮುಖರ್ಜಿ ಅವರ ಪುತ್ಥಳಿಯನ್ನು ಧ್ವಂಸಗೊಳಿಸಲಾಗಿದೆ. ಘಟನೆ ಸಂಬಂಧ 7 ಮಂದಿಯನ್ನು ಬಂಧಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ