ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು: ಗೃಹ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು, ಮಾ.7- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಬಳಿ ತೆರಳಿ ಹೆಚ್ಚಿನ ಮಾಹಿತಿ ಪಡೆದು ವಿವರಗಳನ್ನು ನೀಡುತ್ತೇನೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು, ವ್ಯಕ್ತಿಯೊಬ್ಬ ಲೋಕಾಯುಕ್ತ ಕಚೇರಿಗೆ ಲೋಕಾಯುಕ್ತರನ್ನು ಭೇಟಿ ಮಾಡುವ ಸಂಬಂಧ ತೆರಳಿದ್ದಾರೆ.
ಈ ಸಂದರ್ಭದಲ್ಲಿ ಲೋಕಾಯುಕ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆತನನ್ನು ಬಂಧಿಸಲಾಗಿದೆ. ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೆÇಲೀಸ್ ಆಯುಕ್ತರು ತಿಳಿಸಿದ್ದಾರೆ. ನಾನು ಸ್ಥಳಕ್ಕೆ ತೆರಳಿ ಹೆಚ್ಚಿನ ಮಾಹಿತಿ ಪಡೆದು ವಿವರ ತಿಳಿಸುತ್ತೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ವಿಚಾರಣೆಗೆಂದು ಬಂದಿರುವುದೊ ಅಥವಾ ಭೇಟಿ ಮಾಡಲು ಬಂದಿರುವುದೋ ಸ್ಪಷ್ಟ ಮಾಹಿತಿ ಇನ್ನು ಲಭ್ಯವಾಗಿಲ್ಲ. ವಿಚಾರಣೆಗೆ ಬಂದಿದ್ದರೆ ಅಲ್ಲಿ ಕೋರ್ಟ್ನ ವ್ಯವಸ್ಥೆ ಇರುತ್ತದೆ. ಭೇಟಿ ಮಾಡಲು ಬಂದಿರಬಹುದೋ ಏನು ಇನ್ನು ಸ್ಪಷ್ಟವಾಗಿಲ್ಲ. ಮಾಹಿತಿ ಪಡೆದು ತಿಳಿಸುತ್ತೇನೆ ಎಂದು ಹೇಳಿದರು.