ನವದೆಹಲಿ, ಮಾ.7-ಬ್ಯಾಂಕ್ ಖಾತೆಗಳು, ಮೊಬೈಲ್ ಫೆÇೀನ್ಗಳು ಹಾಗೂ ಇತರ ಸೇವೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಸೇರಿಸಲು ನಿಗದಿಗೊಳಿಸಲಾಗಿರುವ ಮಾರ್ಚ್ 31ರ ಗಡುವು ವಿಸ್ತರಣೆಯಾಗುವ ಸಾಧ್ಯತೆ ಇದೆ.
ಕಾಲಾವಧಿ ವಿಸ್ತರಣೆಯಾಗಬಹುದು ಎಂಬ ಬಗ್ಗೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಈ ಹಿಂದೆ ಕೇಂದ್ರ ಸರ್ಕಾರ ಗಡುವು ವಿಸ್ತರಿಸಿತ್ತು. ಈಗಲೂ ಅದನ್ನು ವಿಸ್ತರಿಸಬಹುದಾಗಿದೆ. ಅಗತ್ಯವಿದ್ದರೆ ಮತ್ತೆ ಅದನ್ನು ಮಾಡುತ್ತೇವೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಸಾಂವಿಧಾನಿಕ ಪೀಠಕ್ಕೆ ತಿಳಿಸಿದ್ದಾರೆ. -ಬ್ಯಾಂಕ್ ಖಾತೆಗಳು, ಮೊಬೈಲ್ ಫೆÇೀನ್ಗಳು ಹಾಗೂ ಇತರ ಸೇವೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಸೇರಿಸಲು ನಿಗದಿಗೊಳಿಸಲಾಗಿರುವ ಮಾರ್ಚ್ 31ರ ಗಡುವು ಸಮೀಪಿಸುತ್ತಿರುವ ಕಾರಣ ಅರ್ಜಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆಗ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್ ಅಗತ್ಯವಿದ್ದರೆ ಗಡುವು ವಿಸ್ತರಿಸಬಹುದಾಗಿದೆ ಎಂದು ಹೇಳಿದರು.