ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್ಕುಮಾರ್
ಬೆಂಗಳೂರು, ಮಾ.8- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಗುಣಮುಖರಾಗುತ್ತಿದ್ದಾರೆ ಎಂದು ಬೆಂಗಳೂರು ನಗರ ಪೆÇಲೀಸ್ ಆಯುಕ್ತರಾದ ಟಿ.ಸುನಿಲ್ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಶೆಟ್ಟಿ ಅವರು ಮಾತನಾಡುತ್ತಿದ್ದಾರೆ. ಯಾವುದೇ ತೊಂದರೆ ಇಲ್ಲ. ಮೂರು ಕಡೆ ಚಾಕು ಇರಿತದಿಂದ ಗಾಯಗೊಂಡಿದ್ದ ಅವರಿಗೆ ಮಲ್ಯ ಆಸ್ಪತ್ರೆಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಭದ್ರತಾ ವೈಫಲ್ಯ: ಲೋಕಾಯುಕ್ತ ಕಚೇರಿಯಲ್ಲಿ ಭದ್ರತಾ ವೈಫಲ್ಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುನಿಲ್ಕುಮಾರ್ ಅವರು ತಿಳಿಸಿದರು.
ಭದ್ರತಾ ವೈಫಲ್ಯದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಿಸಿಬಿ ವಿಭಾಗದ ಜಂಟಿ ಪೆÇಲೀಸ್ ಆಯುಕ್ತರಿಗೆ ಆದೇಶಿಸಲಾಗಿದೆ. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿ ವರದಿ ನೀಡಿದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.