
ವಿಶ್ವ ಮಹಿಳಾ ದಿನಾಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ
ಬೆಂಗಳೂರು, ಮಾ.8- ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲೆಡೆ ಮಹಿಳೆಯರಿಗೆ ಸಮಾನತೆ ಸಿಕ್ಕಿ ಲಿಂಗತಾರತಮ್ಯಅಳಿಯಲಿ ಎಂದು ಹಾರೈಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ವಿಶ್ವದ ಎಲ್ಲಾ ಮಹಿಳೆಯರಿಗೂ ವಿಶ್ವ ಮಹಿಳಾ ದಿನಾಚರಣೆ ಶುಭಾಶಯಗಳು. ಈ ಸಂದರ್ಭದಲ್ಲಿ ಮಹಿಳೆಯರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ಸಿಗಲಿ. ಲಿಂಗತಾರತಮ್ಯ ನಿವಾರಣೆಯಾಗಿ ಸಮ ಸಮಾಜ ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.