
ಬೆಂಗಳೂರು, ಮಾ.8- ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಲ್.ಬಿ.ಶಾಸ್ತ್ರಿ ನಗರದ ನಿವಾಸಿ ಮೇರಿ ಸ್ಟೆಲ್ಲಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ನಿನ್ನೆ ಸಂಜೆ 5 ಗಂಟೆ ಸಮಯದಲ್ಲಿ ಮನೆಯ ಕಬ್ಬಿಣದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು , ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಎಚ್‍ಎಎಲ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.