ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಮತ್ತೆ ಅನಿರ್ಧಿಷ್ಟ ಧರಣಿ ಎಚ್ಚರಿಕೆ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಮತ್ತೆ ಅನಿರ್ಧಿಷ್ಟ ಧರಣಿ ಎಚ್ಚರಿಕೆ
ಬೆಂಗಳೂರು, ಮಾ.8- ಕನಿಷ್ಠ ಸೇವಾ ಭದ್ರತೆ ಒದಗಿಸದಿದ್ದರೆ ಇದೇ 11ರಿಂದ ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಅನಿರ್ಧಿಷ್ಟ ಧರಣಿ ನಡೆಸಲು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಒಕ್ಕೂಟ ನಿರ್ಧರಿಸಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಆರ್.ಡಿ.ಛಲವಾದಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದಲೂ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕನಿಷ್ಠ ಮಾಸಿಕ ವೇತನ ಪಡೆದು ಸೇವೆ ಸಲ್ಲಿಸುತ್ತಿದ್ದೇವೆ. ಪ್ರತಿ 6 ತಿಂಗಳಿಗೊಮ್ಮೆ ವೇತನ ಪಡೆಯುತ್ತೇವೆ. ಪಿಎಚ್‍ಡಿ ಹಾಗೂ ಸರಿಸಮಾನ ಅರ್ಹತೆ ಹೊಂದಿದವರಿಗೆ 13 ಸಾವಿರ ಮತ್ತು ಇತರರಿಗೆ 11 ಸಾವಿರ ಮಾಸಿಕ ವೇತನ ನೀಡಲಾಗುತ್ತಿದೆ. ಯುಜಿಸಿ ನಿಯಮದ ಅನ್ವಯ ವೇತನ ಪಾವತಿಸುವಂತೆ ಮನವಿ ಮಾಡಿದ್ದರೂ ಸರ್ಕಾರ ಇದನ್ನು ಪರಿಗಣಿಸಿಲ್ಲ ಎಂದು ಆರೋಪಿಸಿದರು.
ಸಾವಿರಾರು ಅತಿಥಿ ಉಪನ್ಯಾಸಕರು ಸರ್ಕಾರಿ ಉದ್ಯೋಗಕ್ಕೆ ಸೇರುವ ವಯೋಮಿತಿಯನ್ನು ಮೀರಿದ್ದಾರೆ. ಕಾರಣ ಕಷ್ಟಕರ ಜೀವನ ಸಾಗಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರಿ ಸೇವೆಯಲ್ಲಿ ವೀಲಿನಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
2013ರಲ್ಲಿ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಂಡಂತೆ ಮೊರಾರ್ಜಿ ದೇಸಾಯಿ ಶಾಲೆಗಳ ಶಿಕ್ಷಕರ ನೇಮಕಾತಿಯಲ್ಲಿ ಶೇ.4ರಿಂದ 40ರಷ್ಟು ಪ್ರತಿಶತ ಗರಿಷ್ಠ ಅಂಕಗಳನ್ನು ನೀಡಿ ನೇಮಕ ಮಾಡಿಕೊಂಡಿರುವಂತೆ ಪದವಿಪೂರ್ವ ಶಿಕ್ಷಣೆ ಇಲಾಖೆಯಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಯನ್ನು ಸೇವೆಯಲ್ಲಿ ವಿಲೀನಗೊಳಿಸದಂತೆ ನಮ್ಮ ಸೇವೆಯನ್ನೂ ವಿಲೀನಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ