ಮೈಸೂರು:ಮಾ-8: ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಪಿ.ಸುಂದರ್ ಗೌಡ ಹಾಗೂ ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮಿ ನಾಯ್ಕ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಮದುವೆ ನಂತರ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನವಜೋಡಿ ವಿಡಿಯೋ ಹರಿಬಿಟ್ಟಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಶಾಸಕರ ಪುತ್ರಿ, ನಾನು ನನ್ನ ಸ್ವಇಚ್ಛೆಯಿಂದಲೇ ಮದುವೆ ಆಗಿದ್ದೇನೆ. ಇದರಲ್ಲಿ ಯಾರ ಒತ್ತಡವೂ ಇಲ್ಲ. ನಮ್ಮಿಂದ ಯಾರಿಗೂ ತೊಂದರೆ ಆಗುವುದು ಬೇಡ. ನಾನು ಹಾಗೂ ಸುಂದರ್ ಗೌಡ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ. ನಾನು ಮೈನರ್ ಅಲ್ಲ, ಮೇಜರ್ ಹಾಗಾಗಿ ನನ್ನ ಬುದ್ಧಿಯಿಂದ ವಿಚಾರ ಮಾಡಿ ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಶಾಸಕರು ತಮ್ಮ ಪುತ್ರಿ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದು, ಪೊಲೀಸರು ಲಕ್ಷ್ಮಿ ಹಾಗೂ ಸುಂದರ್ ಗೌಡ ಅವರ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿತ್ತು. ಇದೀಗ ನವಜೋಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಕಳಿಸುವ ಮೂಲಕ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
Lakshmi Naik,Sundar Gowda, selfie video post, wedding