ಬೆಂಗಳೂರು:ಮಾ-8: ಮಾಯಕೊಂಡ ಕ್ಷೇತ್ರದ ಶಾಸಕ ಶಿವಮೂರ್ತಿ ನಾಯ್ಕ್ ಅವರ ಮಗಳನ್ನು ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಮೈಸೂರಿನಲ್ಲಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ.
ಸುಂದರ್ ಗೌಡ ಮತ್ತು ಶಾಸಕರ ಪುತ್ರಿ ಲಕ್ಷ್ಮಿ ನಾಯ್ಕ್ ಇಬ್ಬರೂ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು, ಇಂದು ಬೆಳಿಗ್ಗೆ ಇಬ್ಬರೂ ಮದುವೆಯಾಗಿದ್ದಾರೆ ಎಂದು ನಟ ದುನಿಯಾ ವಿಜಯ್ ತಿಳಿಸಿದ್ದಾರೆ.
ಆದರೆ ಈ ನಡುವೆ ತಮ್ಮ ಮಗಳನ್ನು ಹುಡುಕಿ ಕೊಡುವಂತೆ ಶಾಸಕ ಶಿವಮೂರ್ತಿ ನಾಯ್ಕ್ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಕಾಣೆಯಾಗಿರುವ ಪ್ರಕರಣ ದಾಖಲಿಸಿಕೊಂಡು ನಿರ್ಮಾಪಕ ಸುಂದರ್ ಗೌಡರ ಹುಡುಕಾಟದಲ್ಲಿ ತೊಡಗಿದ್ದಾರೆ.
ಸದ್ಯ ಸುಂದರ್ ಗೌಡ ಹಾಗೂ ಲಕ್ಷ್ಮಿ ಮೈಸೂರಿನಲ್ಲಿ ಇರುವ ಬಗ್ಗೆ ಮಾಹಿತಿ ದೊರೆತಿದ್ದು, ಇಬ್ಬರು ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಒಂದು ವರ್ಷದಿಂದ ಇಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಜಾತಿ ಬೇರೆ ಬೇರೆಯಾಗಿದ್ದ ಕಾರಣ ಶಾಸಕ ಶಿವಮೂರ್ತಿ ನಾಯ್ಕ್ ಈ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರೂ ಮನೆ ಬಿಟ್ಟು ಹೋಗಿ ಮದುವೆಯಾಗಲು ನಿರ್ಧರಿಸಿ, ಇಂದು ಮದುವೆಯಾಗಿದ್ದಾರೆ ಎನ್ನಲಾಗಿದೆ.
MLA Shivamurthy Naik,Daughter, Marries, ‘Mastigudi’, Movie Producer Sundar P Gowda