ಕೊಳ್ಳೆಗಾಲ,ಮಾ.8-ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಬೆದರಿಸಿ ಚಿನ್ನಾಭರಣ ಹಣ ದೋಚುತ್ತಿದ್ದ ಆರೋಪಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 165 ಗ್ರಾಂ ಚಿನ್ನಾಭರಣ, ಕಾರು ಹಾಗೂ ಬೈಕ್ನ್ನು ವಶಪಡಿಸಿಕೊಂಡಿದ್ದಾರೆ.
ಸಾಮಂದಿಗೆರೆ ನಿವಾಸಿ ಅಬ್ದುಲ್ ರಹೀಮ್ ಬಂಧಿತ ಕಳ್ಳ.
ಈತ ಒಬ್ಬಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಹಾಗೂ ವಿದ್ಯಾರ್ಥಿಗಳನ್ನು ದೌರ್ಬಲ್ಯಗಳನ್ನು ಗುರಿಯಾಗಿರಿಸಿಕೊಂಡು ಅವರನ್ನು ಬೆದರಿಸಿ ಚಿನ್ನಾಭರಣ ಹಾಗೂ ವಾಹನಗಳನ್ನು ದರೋಡೆ ಮಾಡುತ್ತಿದ್ದ.
ಈ ಹಿಂದೆ ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಹಣ ವಸೂಲಿ ಮಾಡಿದ್ದ. ಈ ಸಂಬಂಧ ವಿದ್ಯಾರ್ಥಿಯ ತಂದೆ ಪಟ್ಟಣ ಠಾಣೆಗೆ ದೂರು ನೀಡಿದ್ದರು.
ಕಾರ್ಯಾಚರಣೆಗಿಳಿದ ಪೆÇಲೀಸರು ಕೊಳ್ಳೆಗಾಲದ ಟೌನ್ನಲ್ಲಿದ್ದ ಅಬ್ದುಲ್ನನ್ನು ಬಂಧಿಸಿದಾಗ, ಆತನಿಂದ 165 ಗ್ರಾಂ ಚಿನ್ನಾಭರಣ, ಒಂದು ಕಾರು ಹಾಗೂ ಬೈಕ್ನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.