ಬೆಂಗಳೂರು, ಮಾ.8- ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ದೇವಸಂದ್ರ ನಿವಾಸಿ ವಿನೋದ್ಕುಮಾರ್ (20) ಮೃತಪಟ್ಟ ಬೈಕ್ ಸವಾರ.
ಇಂದು ಬೆಳಗಿನ ಜಾವ 2.30ರಲ್ಲಿ ವಿನೋದ್ಕುಮಾರ್ ಬೈಕ್ನಲ್ಲಿ ಹೋಗುತ್ತಿದ್ದಾಗ ದೇವಸಂದ್ರ ಜಂಕ್ಷನ್ ಬಳಿಯ ಒಎಂ ರಸ್ತೆಯಲ್ಲಿ ಅತಿ ವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ವಿನೋದ್ಕುಮಾರ್ ಗಂಭೀರ ಗಾಯಗೊಂಡರು.
ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶವವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೆಆರ್ ಪುರಂ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.