ಹಿರಿಯೂರು, ಮಾ.8- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಹಿರಿಯೂರು ಪಟ್ಟಣದ ಭಾರತಮ್ಮ (65), ಮಗಳು ಶಾಂತಮ್ಮ (40), ಮೊಮ್ಮಗ ವಿಷ್ಣು (17) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿದ್ದು, ಅದರಲ್ಲಿ ನಮ್ಮ ಆತ್ಮಹತ್ಯೆ ನಿರ್ಧಾರಕ್ಕೆ ನಾವೇ ಕಾರಣ ಎಂದು ಬರೆಯಲಾಗಿದೆ.
ತಡರಾತ್ರಿ ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು ಇವರ ಮನೆ ಬಳಿ ಜಮಾಯಿಸಿದ್ದರು. ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೂವರ ಶವಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.