ಹೈದರಾಬಾದ್, ಮಾ.9-ಮರಕ್ಕೆ ಕಾರೊಂದು ಅಪ್ಪಳಿಸಿ ಐವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ತೀವ್ರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯಲ್ಲಿ ಪಾಲಿಪಾಡು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಏಳು ಮಂದಿ ಇದ್ದ ಇನ್ನೋವಾ ಕಾರು ರಾಜ್ಯ ಹೆದ್ದಾರಿಯಲ್ಲಿ ಮರವೊಂದಕ್ಕೆ ಅಪ್ಪಳಿಸಿತು. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆಂದು ಪೆÇಲೀಸರು ತಿಳಿಸಿದ್ದಾರೆ.
ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.