ಬೆಂಗಳೂರು, ಮಾ.9- ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಲೋಕಾಯುಕ್ತ ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಿಗೆ ಬಿಗಿ ಭದ್ರತೆ ಒದಗಿಸುವ ಸಂಬಂಧ ಪೆÇಲೀಸ್ ಅಧಿಕಾರಿಗಳೊಂದಿಗೆ ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದರು.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿ, ಹೈಕೋರ್ಟ್, ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್‍ಗಳಲ್ಲಿನ ಕಚೇರಿಗಳಿಗೂ ವಿಶೇಷ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು, ಇಂತಹ ಘಟನೆಗಳು ಮರುಕಳಿಸದಿರಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬೆಲ್ಲ ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೆÇಲೀಸ್ ಆಯುಕ್ತರು, ಹಿರಿಯ ಪೆÇಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಭದ್ರತೆ ಸಂಬಂಧ ತೀರ್ಮಾನ ಕೈಗೊಂಡರು.