ಅಗರ್ತಲಾ:ಮಾ-9: ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಿಕ್ಕೆ ತರುವ ಮೂಲಕ ಈಶಾನ್ಯ ರಾಜ್ಯದಲ್ಲಿ ಅಭಿವೃದ್ಧಿಯ ಬೆಳಕು ಹಚ್ಚಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತ್ರಿಪುರಾ ನೂತನ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಸರ್ಕಾರ ರಚನೆ ಮೂಲಕ ತ್ರಿಪುರಾದಲ್ಲಿ ಅಭಿವೃದ್ಧಿಯ ಹಣತೆ ಹಚ್ಚಿದ್ದೇವೆ. ನಿಜಕ್ಕೂ ತ್ರಿಪುರಾಗೆ ಇಂದು ಐತಿಹಾಸಿಕ ದಿನವಾಗಿದ್ದು, ರಾಜ್ಯದ ಜನತೆ ದೀಪಾವಳಿ ಆಚರಿಸುತ್ತಿದ್ದಾರೆ ಎಂಬ ಭಾವನೆ ಎಂದರು.