![HDD-nitin gadkari](http://kannada.vartamitra.com/wp-content/uploads/2018/03/HDD-nitin-gadkari-678x381.jpg)
ನವದೆಹಲಿ:ಮಾ-8:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ದೇವೇಗೌಡರು, ಕಾವೇರಿ ವಿವಾದ ಬಗ್ಗೆ ಸುಪ್ರೀಂ ಕೊರ್ಟ್ ತೀರ್ಪಿನ ಬಗ್ಗೆ ಕೆಲ ವಿಷಯಗಳನ್ನು ಅಧ್ಯಯನ ಮಾಡಿದ್ದೇನೆ. ಅದರ ಆಧಾರದ ಮೇಲೆ ಗಡ್ಕರಿ ಜೊತೆ ಚರ್ಚಿಸಿದ್ದೇನೆ. ಮರು ಪರಿಶೀಲನೆ ಅರ್ಜಿ ಹಾಕುವ ಕುರಿತು ಚರ್ಚಿಸಿದ್ದೇನೆ ಎಂದು ಹೇಳಿದರು.
ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಕಾಲವಕಾಶ ಕೇಳುವಂತೆ ಮನವಿ ಮಾಡಿದ್ದೇನೆ. ಮಂಡಳಿ ರಚನೆಯ ವೇಳೆ ಈ ಭಾಗದ ಕುಡಿಯುವ ನೀರಿನ ಅಗತ್ಯತೆಯನ್ನು ಪರಿಗಣಿಸುವುದಲ್ಲದೆ ಅದಕ್ಕಿರುವ ನ್ಯೂನ್ಯತೆಗಳನ್ನು ಸರಿಪಡಿಸಿ ಸುಪ್ರಿಂಕೋರ್ಟ್ ತೀರ್ಪಿನ ಅನುಸಾರವಾಗಿ ಮಂಡಳಿ ರಚಿಸಬೇಕು ಹಾಗೂ ಎರಡು ರಾಜ್ಯಕ್ಕೂ ನ್ಯಾಯ ಒದಗಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.