ಕೇಂದ್ರ ಸಚಿವರಾಗಿದ್ದ ಟಿಡಿಪಿಯ ಅಶೋಕ್ ಗಜಪತಿರಾಜು ಹಾಗೂ ವೈ.ಎಸ್. ಚೌಧರಿ ರಾಜೀನಾಮೆ ಅಂಗೀಕಾರ

ನವದೆಹಲಿ:ಮಾ-9: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೆಲುಗು ದೇಶಂ ಪಕ್ಷದ ಅಶೋಕ್ ಗಜಪತಿರಾಜು ಹಾಗೂ ವೈ.ಎಸ್. ಚೌಧರಿ ಅವರ ರಾಜೀನಾಮೆ ಅಂಗೀಕಾರವಾಗಿದೆ.

ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ಸೂಚನೆ ಮೇರೆಗೆ ಈ ಇಬ್ಬರು ಸಚಿವರು ನಿನ್ನೆ ಸಂಜೆ ರಾಜೀನಾಮೆ ನೀಡಿದ್ದರು.

ಇಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ ಇಬ್ಬರೂ ಸಚಿವರ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ತಿಳಿಸಿದೆ.

ಅಂತೆಯೇ ಗುರುವಾರ ಸಂಜೆ ಮೋದಿ ಸಂಪುಟದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಅಶೋಕ್ ಗಜಪತಿ ರಾಜು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾಗಿದ್ದ ವೈ.ಎಸ್.ಚೌಧರಿ ರಾಜೀನಾಮೆ ಪತ್ರ ರವಾನಿಸಿದ್ದರು.

President Accept,Resignation,TDP Ministers

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ