ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ

ನವದೆಹಲಿ, ಮಾ.9- ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿರುವ ಟಿಡಿಪಿ ಸಂಸದರ ರಾಜಿನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಇಂದು ಪ್ರಧಾನಿ ಸಚಿವಾಲಯದ ಸಲಹೆ ಮೇರೆಗೆ ರಾಷ್ಟ್ರಪತಿ ಕೋವಿಂದ್ ಅವರು ಟಿಡಿಪಿ ಸಂಸದ ಮತ್ತು ಕೇಂದ್ರ ಸಚಿವರಾಗಿದ್ದ ಅಶೋಕ್ ಗಜಪತಿ ರಾಜು ಮತ್ತು ವೈ.ಎಸ್.ಚೌಧರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಶೋಕ್ ಗಜಪತಿರಾಜು ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿಯೂ ವೈಎಸ್ ಚೌಧರಿ ಅವರು, ವಿe್ಞÁನ ಮತ್ತು ತಂತ್ರe್ಞÁನ ರಾಜ್ಯ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಇದೀಗ ಈ ಇಬ್ಬರು ಸಚಿವರ ರಾಜಿನಾಮೆಯನ್ನು ರಾಷ್ಟ್ರಪತಿ ಕೋವಿಂದ್ ಅವರು ರಾಜಿನಾಮೆ ಅಂಗಿಕರಿಸಿದ್ದು, ಈ ಬಗ್ಗೆ ಇಂದು ರಾಷ್ಟ್ರಪತಿ ಭವನ ಹೇಳಿಕೆ ಬಿಡುಗಡೆ ಮಾಡಿದೆ.
ಇದೀಗ ಈ ಎರಡೂ ಸ್ಥಾನಗಳು ತೆರವಾಗಿದೆ. ತಾತ್ಕಾಲಿಕವಾಗಿ ನಾಗರಿಕ ವಿಮಾನಯಾನ ಇಲಾಖೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ನಿರ್ವಹಿಸಲಿದ್ದು, ವಿe್ಞÁನ ಮತ್ತು ತಂತ್ರe್ಞÁನ ಇಲಾಖೆಯ ಜವಾಬ್ದಾರಿಯನ್ನು ಇತರೆ ಸಚವರಿಗೆ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ