ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ರೋಶ
ಬೆಂಗಳೂರು, ಮಾ.9- ಕಳೆದ 2-3 ವರ್ಷಗಳಿಂದ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗುತ್ತಿವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರಿಗೆ ಭೇಟಿ ನೀಡಿದ ಅವರು, ರಾಜ್ಯದ ಹಿರಿಯ ಪೆÇಲೀಸ್ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಬಳಿಕ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
2017-2018ರಲ್ಲಿ ರಾಜ್ಯದಲ್ಲಿ 22 ಮತ್ತು ಬೆಂಗಳೂರಿನಲ್ಲಿ 49 ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಬಹುತೇಕ ಪ್ರಕರಣಗಳಲ್ಲಿ ಪೆÇಲೀಸರು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳುವ ಬದಲು ನಿಧಾನಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವು ಪ್ರಕರಣಗಳಲ್ಲಿ ದೂರು ಕೊಟ್ಟು ವರ್ಷವಾದರೂ ಏನೂ ಕ್ರಮ ಕೈಗೊಂಡಿಲ್ಲ. ಇನ್ನು ಕೆಲವು ಪ್ರಕರಣಗಳಲ್ಲಿ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾಪತ್ತೆಯಾದ ದೂರುಗಳು:
ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿದ್ದ ದೂರು ಆಧರಿಸಿ ಕ್ರಮ ತೆಗೆದುಕೊಳ್ಳುವಂತೆ 17 ಪ್ರಕರಣಗಳ ಮಾಹಿತಿಯನ್ನು ರಾಜ್ಯ ಪೆÇಲೀಸರಿಗೆ ನೀಡಲಾಗಿತ್ತು. ಆದರೆ, ನಾವು ನೀಡಿದ ಮಾಹಿತಿ ಪ್ರಕರಣಗಳಲ್ಲಿ ದೂರುಗಳೇ ಇಲ್ಲ ಎಂದು ಪೆÇಲೀಸರು ತಿಳಿಸಿದ್ದಾರೆ.
ಹಾಗಿದ್ದರೆ ಆ ದೂರುಗಳು ಎಲ್ಲಿ ಹೋದವು ಎಂದು ಪ್ರಶ್ನಿಸಿದ ರೇಖಾ ಶರ್ಮಾ, ಇಲ್ಲಿ ದೂರುಗಳನ್ನೇ ದಾಖಲಿಸುತ್ತಿಲ್ಲ ಎನ್ನಿಸುತ್ತಿದೆ. ಸಮಸ್ಯೆ ಇರುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ಮಹಿಳಾ ಆಯೋಗ ಸ್ವಂತ ವೆಬ್ಸೈಟ್ ಹೊಂದಿದ್ದು, ಬಹಳಷ್ಟು ಪ್ರಕರಣಗಳಲ್ಲಿ ಇ-ಮೇಲ್ ಮೂಲಕ ನೇರವಾಗಿ ದೂರುಗಳು ಬರುತ್ತಿವೆ. ಅದನ್ನು ಆಧರಿಸಿ ಕ್ರಮ ಕೈಗೊಳ್ಳಲು ಆಯೋಗ ಸೂಚನೆ ನೀಡುತ್ತದೆ. ಆಯೋಗ ನೇರವಾಗಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪೆÇಲೀಸರ ಮೂಲಕವೇ ಕೆಲಸ ಮಾಡಿಸಬೇಕು ಆದರೆ, ಪೆÇಲೀಸರು ಶ್ರಮಿಸುತ್ತಿಲ್ಲ. ತುಂಬಾ ನಿಧಾನಗತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮಹಿಳಾ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಆಯೋಗದ ಜತೆ ಸಮನ್ವಯ ಸಾಧಿಸಲು ನೋಡೆಲ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಪೆÇಲೀಸರು ಒಪ್ಪಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಕಳೆದ ಆಗಸ್ಟ್ 31ರಂದು ಸಾಫ್ಟ್ವೇರ್ ಇಂಜನಿಯರ್ ಒಬ್ಬರ ಮೇಲೆ ಅತ್ಯಾಚಾರವಾಗಿತ್ತು. ಆಪ್ರಕರಣದ ಕುರಿತು ಇಂದು ವರದಿ ನೀಡಲಾಗಿದೆ. ಆರೋಪಿಯನ್ನು ಬಂಧಿಸಿದ್ದೇವೆ ಎಂದು ಹೇಳುತ್ತಾರೆ. ಇನ್ನು ಈಶಾನ್ಯ ಭಾಗದ ರಾಜ್ಯಕ್ಕೆ ಸೇರಿದ ಮಹಿಳೆಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು, ಅದನ್ನು ಪೆÇಲೀಸರು ಆತ್ಮಹತ್ಯೆ ಎನ್ನುತ್ತಿದ್ದಾರೆ. ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಘಟನೆಗೆ ಇಂದು ಆಯೋಗಕ್ಕೆ ವರದಿಯಾಗಿದೆ. ಇದು ಪೆÇಲೀಸರ ಕಾರ್ಯದ ವೇಗವನ್ನು ಸೂಚಿಸುತ್ತದೆ ಎಂದರು.
ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಮದುವೆ ಮುರಿದು ಬಿದ್ದಿದೆ. ವರದಕ್ಷಿಣೆ ಮೊತ್ತವನ್ನು ವಾಪಸ್ ಕೊಡಿಸಿಎಂದು ದೂರು ನೀಡಿ ವರ್ಷ ಕಳೆದಿದೆ ಕಳೆದ ಬಾರಿ ನಾನು ಬೆಂಗಳೂರಿಗೆ ಬಂದಾಗ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪೆÇಲೀಸರಿಗೆ ಸೂಚಿಸಿದ್ದೆ ಯಾವುದೇ ಪ್ರಯೋಜನವಾಗಿಲ್ಲ. ಅದೇ ಮಹಿಳೆ ನನಗೆ ಮತ್ತೆ ಬಂದು ದೂರು ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರನಲ್ಲಿ ಸೈಬರ್ಕ್ರೈಂ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. 49 ಪ್ರಕರಣಗಳಲ್ಲಿ 8 ಪ್ರಕರಣಗಳು ಐಟಿ ಕ್ಷೇತ್ರಕ್ಕೆ ಸೇರಿದ ಕಿರುಕುಳ ಪ್ರಕರಣಗಳಾಗಿವೆ. ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯಗಳು ಹೆಚ್ವಾಗುತ್ತಿವೆ ಎಂದು ಬೇಸರಪಟ್ಟರು.
ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಪತ್ನಿ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.
ಜಾರ್ಖಂಡ್ನಲ್ಲಿ ದಲಿತ ಬಾಲಕಿಯನ್ನು ಜೀವಂತವಾಗಿ ಸುಟ್ಟ ಪ್ರಕರಣ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಮಾಹಿತಿ ಪಡೆಯಲು ತಂಡವೊಂದನ್ನು ಆಯೋಗ ಕಳುಹಿಸಿದೆ ಎಂದು ಹೇಳಿದರು.
ಆಯೋಗದ ಪ್ರವೀಣ್ಸಿಂಗ್, ಡಿಐಜಿ ಸತೀಶ್ಕುಮಾರ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.