ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿ£ ಆರೋಪಕ್ಕೆ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಸೂಚನೆ
ಬೆಂಗಳೂರು, ಮಾ.9-ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿನ ಆಕ್ಷೇಪದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಿದೆ.
ತಮಿಳುನಾಡಿಗೆ ಬಿಡಲಾಗುತ್ತಿರುವ ನೀರು ಮಾಲಿನ್ಯದಿಂದ ಕೂಡಿದೆ. ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಪಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬೊಬ್ಬೆ ನೇತೃತ್ವದ ದ್ವಿಸದಸ್ಯ ಪೀಠ ಎರಡು ರಾಜ್ಯಗಳ ಸಮಿತಿ ರಚಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಿತ್ತು.
ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಆಧರಿಸಿ ವಿಚಾರಣೆ ನಡೆಸಿದ ನ್ಯಾಯಾಲಯ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಂಡಳಿಗೆ ಸೂಚನೆ ನೀಡಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.
ರಾಷ್ಟ್ರೀಯ ಮಾಲಿನ್ಯ ನಿಯಂತ್ರಣಾ ಮಂಡಳಿ ಸಲ್ಲಿಸಿದ್ದ ವರದಿ ನಿನ್ನೆಯಷ್ಟೇ ತಲುಪಿದೆ. ವರದಿ ಅಧ್ಯಯನ ಮಾಡಲು ಕಾಲಾವಕಾಶ ಬೇಕು ಎಂದು ಕರ್ನಾಟಕ ವಕೀಲರು ವಾದ ಮಂಡಿಸಿದ್ದರು.
ವಾದ-ವಿವಾದ ಆಲಿಸಿದ ನ್ಯಾಯಾಲಯ ಸಮಿತಿ ರಚಿಸಿ ವರದಿಗೆ ಸೂಚಿಸಿದೆ.