ಬೆಂಗಳೂರು,ಮಾ.9-ಲೋಕಾಯುಕ್ತರಿಗೆ ಚಾಕು ಇರಿದ ಆರೋಪಿ ತೇಜ್ರಾಜ್ ಶರ್ಮನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಅವರ ಕಚೇರಿಯಲ್ಲಿಯೇ ಚಾಕು ಇರಿದು ಹಲ್ಲೆ ಮಾಡಿದ್ದ ಆರೋಪಿ ತೇಜ್ರಾಜ್ನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದರು.
ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ಅವರು ಸಿಸಿಬಿ ಪೊಲೀಸರಿಗೆ ವಹಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಚೇತರಿಕೆ: ಚಾಕು ಇರಿತದಿಂದ ಗಾಯಗೊಂಡಿರುವ ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಲ್ಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.