ಬೆಂಗಳೂರು, ಮಾ.11-ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಳೆಯಿಂದ ಮಾ.14 ರವರೆಗೆ 2ನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ಆಯೋಜಿಸಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಅಭಿಯಾನದ ಮೊದಲನೇ ದಿನದಿಂದ ಬೂತ್ಗಳಲ್ಲಿ ಲಸಿಕಾ ಕೇಂದ್ರಗಳನ್ನು ಆಯೋಜಿಸಲಾಗಿರುತ್ತದೆ, ನಂತರದಲ್ಲಿ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಲಸಿಕಾ ಬೂತುಗಳಲ್ಲಿ ಪಲ್ಸ್ ಪೆಪೋಲಿಯೊ ಸೌಲಭ್ಯ ನೀಡಲಾಗುತ್ತದೆ.
ಅನಂತರ ನಗರ ಪ್ರದೇಶಗಳ್ಲಿ ಮೂರು ದಿನ ಹಾಗೂ ಗ್ರಾಮೀಣ ಪ್ರದೇಶಗಲ್ಲಿ ಎರಡು ದಿನ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆಗಳನ್ನು ನೀಡಲಿದ್ದಾರೆ. ಐದು ವರ್ಷದೊಳಗಿನ ಯಾವುದೇ ಮಕ್ಕಳು ಕೈ ಬಿಟ್ಟು ಹೋಗದಂತೆ ಎಚ್ಚರ ವಹಿಸುವುದು ಈ ಅಭಿಯಾನದ ಉದ್ದೇಶವಾಗಿದ್ದು ಸಾರ್ವಜನಿಕರು ತಪ್ಪದೇ ಅಭಿಯಾನದ ಸಂದರ್ಭದಲ್ಲಿ ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಲು ಕೋರಿದೆ.
ಈ ಅಭಿಯಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟಾರೆ 2195 ಪೋಲಿಯೊ ಬೂತ್ಗಳನ್ನು ಗುರುತಿಸಲಾಗಿದೆ, 8778 ಕಾರ್ಯಕರ್ತರು ಲಸಿಕೆ ನೀಡುವ ಕಾರ್ಯ ನಿರ್ವಹಿಸಲಿದ್ದು, 439 ಜನ ಈ ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಮಹಾನಗರ ಪಾಲಿಕೆ ವಾಪ್ತಿಯ 63 ವಾರ್ಡುಗಳು ಸೇರಿದಂತೆ ಜಿಲ್ಲೆಯಲ್ಲಿ ಐದು ವರ್ಷದೊಳಗಿನ 639746 ಮಕ್ಕಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.