ಮೈಸೂರು, ಮಾ.10-ತವರು ಜಿಲ್ಲೆ ಮೈಸೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆಯಿಂದ ಸಂಜೆಯವರೆಗೂ ಸುಮಾರು 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಬ್ಯುಸಿಯಾಗಿದ್ದರು.
ಚುನಾವಣಾ ದಿನಾಂಕ ಶೀಘ್ರ ಘೋಷಣೆಯಾಗುವ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ತಮ್ಮ ಜಿಲ್ಲೆಯಲ್ಲಿ ನಿನ್ನೆ ಹಾಗೂ ಇಂದು ಹತ್ತು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ನಿನ್ನೆ ಜಿಲ್ಲೆಯ ಹಲವೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು, ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೆಲವು ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿದರು.