ಭಾರತ-ಫ್ರಾನ್ಸ್ ನಡಿವೆ 14 ಒಪ್ಪಂದಗಳಿಗೆ ಸಹಿ

ನವದೆಹಲಿ:ಮಾ-10: ಭಾರತ-ಫ್ರಾನ್ಸ್ ದೇಶಗಳು ಮಹತ್ವದ 14 ಒಪ್ಪಂದಗಳಿಗೆ ಸಹಿ ಹಾಕಿವೆ. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಭದ್ರತೆ, ಪರಮಾಣು ಶಕ್ತಿ, ವರ್ಗೀಕೃತ ಮಾಹಿತಿಯ ರಕ್ಷಣೆ ಸೇರಿದಂತೆ ಒಟ್ಟು 14 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಬಳಿಕ ಉಭಯ ದೇಶದ ನಾಯಕರು ಪೌರ ಪರಮಾಣು ಸಹಕಾರ, ಬಾಹ್ಯಾಕಾಶ , ಭಾರತೀಯ ರೈಲ್ವೆಗೆ ವಿದ್ಯುತ್‌ ಚಾಲಿತ ತಂತ್ರಜ್ಞಾನದ ವರ್ಗಾವಣೆ, ಶಿಕ್ಷಣ, ಪರಿಸರ, ನಗರಾಭಿವೃದ್ಧಿ ಮುಂತಾಗಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 14 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ಇದೇ ವೇಳೆ ಇಬ್ಬರೂ ನಾಯಕರು ಇಂಡೋ ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ಒಪ್ಪಂದಗಳಿಗೆ ಸಹಿ ಮಾಡಿದ ಬಳಿಕ ಎರಡೂ ರಾಷ್ಟ್ರಗಳ ನಾಯಕರು ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ರಕ್ಷಣೆ ಮತ್ತು ಭದ್ರತೆಯ ವಿಚಾರದಲ್ಲಿ ಎರಡು ದೇಶಗಳು ದೃಢವಾದ ಸಹಕಾರವನ್ನು ಹೊಂದಿವೆ ಎಂದು ಮೋದಿ ಹೇಳಿದರು.

ಭಯೋತ್ಪಾದನೆ ಪಿಡುಗನ್ನು ಎದುರಿಸುವ ಸಂಬಂಧ ಭಾರತ ಮತ್ತು ಫ್ರಾನ್ಸ್ ಒಟ್ಟಿಗೆ ಕೆಲಸ ಮಾಡಲಿದೆ ಎರಡೂ ರಾಷ್ಟ್ರಗಳ ನಡುವಿನ ರಕ್ಷಾಣಾ ಸಹಕಾರವು ಇದೀಗ ಹೊಸ ಎತ್ತರಕ್ಕೆ ತಲುಪಿದೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ, ಉಭಯ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಗೆ ಅತ್ಯಧಿಕ ಮಹತ್ವ ನೀಡಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. ವಿಶ್ವದ ಎರಡು ಮಹೋನ್ನತ ಪ್ರಜಾಸತ್ತೆಗಳು ಇನ್ನಷ್ಟು ನಿಕಟವಾಗಿ ಪರಿಶ್ರಮಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಎರಡೂ ರಾಷ್ಟ್ರಗಳು ಭಯೋತ್ಪಾದನೆಯಂದಹ ಬೆದರಿಕೆಗಳ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುತ್ತಿವೆ. ನಮ್ಮ ಇತಿಹಾಸವನ್ನು ಹಾಗೂ ದೇಶದ ಸ್ವಾತಂತ್ರ್ಯವನ್ನು ರಕ್ಷಣೆ ಮಾಡಬೇಕು. ಯುರೋಪಿನಲ್ಲಿ ನನ್ನ ದೇಶ ಅತ್ಯುತ್ತಮ ಪಾಲುದಾರನಾಗಬೇಕೆಂದು ನಾನು ಬಯಸುತ್ತೇನೆ. ಭಾರತೀಯ ನಾಗರೀಕರು ವಿದ್ಯಾಭ್ಯಾಸಕ್ಕೆ ಫ್ರಾನ್ಸ್ ಗೆ ಆಗಮಿಸಬೇಕೆಂದು ಆಹ್ವಾನ ನೀಡಿದರು.

ಭಾರತಕ್ಕೆ ಭೇಟಿ ನೀಡಿರುವುದು ಬಹಳ ಸಂತಸವನ್ನು ತಂದಿದೆ. ಭಾರತ ಭೇಟಿ ಹೆಮ್ಮೆ ಎನಿಸುತ್ತಿದೆ. ನನ್ನನ್ನು ಸ್ವಾಗತಿಸಿದ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಹೇಳಿದರು. ಭಾರತ ಹಾಗೂ ಫ್ರಾನ್ಸ್ ನಡುವೆ ಉತ್ತಮ ಬಾಂಧವ್ಯವವಿದೆ. ಎರಡು ಅತ್ಯುತ್ತಮ ಪ್ರಜಾಪ್ರಭುತ್ವ ರಾಷ್ಟ್ರಗಳು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಈ ಭೇಟಿ ಮುಂದಿನ ದಶಕಗಳಲ್ಲಿ ಕಾರ್ಯತಂತ್ರದ ಪಾಲುದಾರಿಕೆಯ ಹೊಸ ಯುಗವನ್ನು ಆರಂಭಿಸುತ್ತದೆ ಎಂದರು.
India, France, ink 14 pacts, including nuclear energy, security

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ