ಬೇಲೂರು, ಮಾ.10-ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೆÇಲೀಸ್ ವೃತ್ತ ನಿರೀಕ್ಷಕ ಯೋಗೀಶ್ ಅವರು ಇಬ್ಬರನ್ನು ಬಂಧಿಸಿ, ಮರಳು ತುಂಬಿದ ಟ್ರ್ಯಾಕ್ಟರ್ ವಶಪಡಿಸಿ ಕೊಂಡಿರುವ ಘಟನೆ ತಾಲೂಕಿನ ಅರೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಂಟಿತೊಳಲು ಗ್ರಾಮದ ಸತೀಶ್(25), ಗಂಗರಾಜು (28) ಬಂಧಿತ ಆರೋಪಿಗಳು.
ತಾಲೂಕಿನ ಬಿಕ್ಕೋಡು ಹೋಬಳಿ ಕೋಡಿಹಳ್ಳಿ ಗ್ರಾಮದ ಸಮೀಪ ವಾಟೇಹೋಳೆ ಡ್ಯಾಮ್‍ನ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಪಿಐ ಯೋಗೇಶ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮರಳು ತುಂಬುತ್ತಿದ್ದ ಇಬ್ಬರು ಹಾಗೂ ಟ್ರ್ಯಾಕ್ಟರ್‍ನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು, ಆತನನ್ನು ಕಾಮತಿ ಕೊಡಿಗೆ ಗ್ರಾಮದ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಅರೇಹಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.