ಹಾಸನ, ಮಾ.10- ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬಳಿ ರಾತ್ರಿ ಸಂಭವಿಸಿದೆ.
ಮೃತಪಟ್ಟ ಯುವಕರ ಹೆಸರು-ವಿಳಾಸ ತಿಳಿದುಬಂದಿಲ್ಲ. ಗ್ರಾಮದಲ್ಲಿ ಕಳೆದ ರಾತ್ರಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಹಾಸನ ಹಾಲು ಉತ್ಪಾದಕರ ಸಂಘಕ್ಕೆ ಸೇರಿದ ಹಾಲಿನ ವಾಹನ ಈ ಮಾರ್ಗವಾಗಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಯುವಕರ ಮೇಲೆ ಹರಿದಿದೆ.
ವಾಹನ ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹಾಲಿನ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿ ತಡರಾತ್ರಿವರೆಗೂ ರಂಪಾಟ ಮಾಡಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಅಗರೆ ಹೊರಠಾಣೆ ಪೆÇಲೀಸರು ಹರಸಾಹಸ ಪಡುವಂತಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆ್ಯಂಬುಲೆನ್ಸ್ ವಾಹನದ ಮೇಲೂ ಗ್ರಾಮಸ್ಥರು ಕಲ್ಲು ತೂರಿದ್ದಾರೆ.
ಒಟ್ಟಿನಲ್ಲಿ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು, ಹಳೆಬೀಡು ಠಾಣೆ ಪೆÇಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿ ಶಾಂತವಾಗಿದೆ.