ಟಿ.ನರಸೀಪುರ, ಮಾ.10- ನಮ್ಮ ತಂದೆ ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂದು ವರುಣಾ ವಿಧಾನ ಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ವರುಣಾ ವಿಧಾನ ಕ್ಷೇತ್ರ ವ್ಯಾಪ್ತಿಯ ಬಿಲಿಗೆರೆಹುಂಡಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದ ನಂತರದಲ್ಲಿ ಹತ್ತು-ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನತೆಯ ಮೆಚ್ಚುಗೆ ಪಡೆದಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಮೂಲಕ ಕಳಂಕ ರಹಿತ ಆಡಳಿತ ನೀಡಿದ್ದಾರೆ.
ಇದೇ ವೇಳೆ ಡಣಾಯಕನಪುರ, ಕಿರಗಸೂರು ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಕಿರಗಸೂರು ಗ್ರಾಪಂ ಅಧ್ಯಕ್ಷ ಅಶ್ವಿನ್, ಉಪಾಧ್ಯಕ್ಷೆ ಚಂದ್ರಮ್ಮ, ಗುರುಸ್ವಾಮೀಜಿ, ನಾಗರಾಜು, ಗೌಡರ ಬಸವರಾಜಪ್ಪ, ಮಹದೇವಪ್ಪ, ನಂಜುಂಡಸ್ವಾಮಿ, ವೀರಭದ್ರಪ್ಪ, ವಕೀಲ e್ಞÁನೇಂದ್ರಮೂರ್ತಿ, ಸಂತೃಪ್ತಿ ಕುಮಾರ್ ಇತರರು ಇದ್ದರು.