ನವದೆಹಲಿ, ಮಾ.11-ನೈಸ್ ಮುಖ್ಯಸ್ಥ, ಶಾಸಕ ಅಶೋಕ್ ಖೇಣಿ ಅವರ ಕಾಂಗ್ರೆಸ್ ಸೇರ್ಪಡೆಗೆ ಕೈ ಮುಖಂಡರಲ್ಲೇ ಅಸಮಾಧಾನ ವ್ಯಕ್ತವಾಗಿದೆ.
ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಸಂಸದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಖೇಣಿ ಸೇರ್ಪಡೆ ವಿಚಾರವಾಗಿ ನನ್ನೊಂದಿಗೆ ಯಾರೂ ಚರ್ಚಿಸಿಲ್ಲ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.