ಬೆಂಗಳೂರು, ಮಾ.12- ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ, ಶಿಸ್ತಿಗೆ ಒಳಪಟ್ಟು ಪಕ್ಷದ ಹುದ್ದೆಯ ಜವಾಬ್ದಾರಿ ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಅಸಂಘಟಿತ ಕಾರ್ಮಿಕರನ್ನು ಒಕ್ಕೂಡಿಸಿ ಸಂಘಟಿಸಿ ಅವರ ಕಲ್ಯಾಣಕ್ಕಾಗಿ ಶ್ರಮಿಸಬೇಕೆಂದು ರಾಜ್ಯಾಧ್ಯಕ್ಷ ಡಾ.ಶಾಂತವೀರ ನಾಯಕ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.