ಅನಂತ್ ನಾಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.
ಅನಂತ್ ನಾಗ್ ಜಿಲ್ಲೆಯ ಹಕುರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ಕಾರ್ಯಾಚರಣೆಗಿಳಿದಿದ್ದವು. ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.