ನವದೆಹಲಿ: ಬಾಂಗ್ಲಾದೇಶದ ಪ್ರಯಾಣಿಕ ವಿಮಾನವು ನೇಪಾಳದ ರಾಜಧಾನಿ ಕಠ್ಮಂಡುನಲ್ಲಿರುವ ತ್ರಿಭುವನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ವಿಮಾನದಲ್ಲಿ 78 ಪ್ರಯಾಣಿಕರಿದ್ದರು ಎಂದು ವರದಿಯಾಗಿದ್ದು, ಕನಿಷ 50 ಮಂದಿ ಸಾವನ್ನಪ್ಪಿರುವುದಾಗಿ ಸುದ್ದಿ ಸಂಸ್ಥೆಯೊಂದು ತಿಳಿಸಿದೆ.
ಇದಕ್ಕೂ ಮುನ್ನ 38 ಮಂದಿ ಸಾವನ್ನಪ್ಪಿದ್ದು, 23 ಪ್ರಯಾಣಿಕರು ಗಾಯಗೊಂಡಿರುವುದಾಗಿ ವರದಿಯಾಗಿತ್ತು. ಗಾಯಗೊಂಡವರ ರಕ್ಷಣಾ ಕಾರ್ಯ ಮುಂದುವರೆದಿದ್ದು, ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ಸಂಪೂರ್ಣವಾಗಿ ನಾಶಗೊಂಡಿದೆ.
ಲ್ಯಾಂಡಿಂಗ್ ಸಮಯದಲ್ಲಿ ಕ್ರಾಶ್
ನೇಪಾಳದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಪ್ಲೇನ್ S2-AGU, ಬೊಂಬಾರ್ಡಿಯರ್ ಡ್ಯಾಶ್ 8 Q400. ಆದಾಗ್ಯೂ, ಅಧಿಕೃತವಾಗಿ ದೃಢೀಕರಿಸಲಾಗಿಲ್ಲ. ಮಾಹಿತಿ ಪ್ರಕಾರ, ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪ್ಪಳಿಸಿತು. ಫ್ಲೈಟ್ ಟ್ರ್ಯಾಕಿಂಗ್ ವೆಬ್ಸೈಟ್ ಫ್ಲೈಟರ್ 24 ಪ್ರಕಾರ, ಅಪಘಾತವು ಸುಮಾರು 2:20 ಗಂಟೆಗೆ ಸಂಭವಿಸಿದೆ.