ಮುಂಬೈ, ಮಾ.12-ಮುಂಬೈನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ತಮ್ಮ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.
ಅಧಿವೇಶನದ ಕಲಾಪದಲ್ಲಿ ಇಂದು ವಿರೋಧ ಪಕ್ಷದ ನಾಯಕ ರಾಧಾಕೃಷ್ಣ ವೀಖೆ ಪಾಟೀಲ್ ಪ್ರಸ್ತಾಪಿಸಿದ ವಿಷಯ ಮೇಲಿನ ಚರ್ಚೆಯಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದರು.
ತಮ್ಮ ಸಮಸ್ಯೆಗಳ ಬಗ್ಗೆ ಗನ ಸೆಳೆಯಲು ನಾಸಿಕ್ನಿಂದ ಮುಂಬೈಗೆ 180 ಕಿ.ಮೀ.ಕಾಲ್ನಡಿಗೆಯಲ್ಲಿ ಸಹಸ್ರಾರು ರೈತರು ಆಗಮಿಸಿದ್ದಾರೆ. ಇದರಿಂದ ಮುಂಬೈನಲ್ಲಿ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೃಷಿಕರು ಮತ್ತು ಬುಡಕಟ್ಟು ಜನರ ಹಿತಾಸಕ್ತಿ ರಕ್ಷಿಸಲು ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕೆಂದು ಪಾಟೀಲ್ ಸದನದಲ್ಲಿ ಆಗ್ರಹಿಸಿದರು.