ಬೆಂಗಳೂರು,ಮಾ.12-ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ಸಂಭ್ರಮದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು , ಹತ್ತರ ಹತ್ತು ಹೆಜ್ಜೆಗಳು ಎಂಬ ಹೆಸರಿನಡಿ ವೈವಿಧ್ಯಮಯ ಸರಣಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಮ್ಮೇಳನದ ಅಧ್ಯಕ್ಷ ಶೇಖರ ಅಜೆಕಾರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.17ರಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಾಡೋಜ ಕೆ.ಪಿ.ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಏ.3ರಂದು ಕಾರ್ಕಳದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಇಂಗ್ಲೀಷ್ ಶಾಲೆಗಳಲ್ಲಿ ಕನ್ನಡದ ಕಾರ್ಯಕ್ರಮ, ಏ.2ರಂದು ಹಿರಿಯಡ್ಕ ಸಮೀಪದ ಪಂಚನಬೆಟ್ಟೂರಿನಲ್ಲಿ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಪಂಚನಬೆಟ್ಟು ಉತ್ಸವ, ಜೂ.4ರಂದು ಎಣ್ಣೆಹೊಳೆ ರಾಧಾನಾಯಕ್ ಶಾಲೆಯಲ್ಲಿ ಯುವಜನ ಸಾಹಿತ್ಯಾಸಕ್ತಿ, ಸಾಹಿತ್ಯಾಭಿರುಚಿ ಕಾರ್ಯಕ್ರಮ ಸೇರಿದಂತೆ ಹತ್ತು ವಿಶಿಷ್ಟ ಆಲೋಚನೆಗಳಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಂಬೈನಲ್ಲೂ ಒಂದು ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ವರ್ಷಾಂತ್ಯಕ್ಕೆ ಬೆಂಗಳೂರಿನಲ್ಲೂ ಸಹ ಒಂದು ಸಾಹಿತ್ಯ ಸಂಭ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.