ಬೆಂಗಳೂರು, ಮಾ.12- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ
ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸಾಹಿತಿ ಡಾ.ಎನ್.ಹನುಮಂತಯ್ಯ, ಡಾ.ಸಯ್ಯದ್ನಾಸೀರ್ ಹುಸೇನ್ ಹಾಗೂ ಜಿ.ಸಿ.ಚಂದ್ರಶೇಖರ್ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ರಾಜ್ಯಸಭೆ ಚುನಾವಣೆ ಅಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ಸಲ್ಲಿಸಿದರು. ಇದರಿಂದ ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ಏರ್ಪಟ್ಟಂತಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಕಾಂಗ್ರೆಸ್ನ ಮೂರನೇ ಅಭ್ಯರ್ಥಿ ಕಣದಲ್ಲಿ ಉಳಿದಿದ್ದೇ ಆದರೆ ಗೆಲುವಿಗಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೆÇೀಟಿ ಏರ್ಪಡಲಿದೆ.ರಾಜ್ಯಸಭೆ ಸದಸ್ಯರಾದ ಕೆ.ರೆಹಮಾನ್ಖಾನ್, ರಾಜೀವ್ ಚಂದ್ರುಶೇಖರ್, ರಂಗಸಾಯಿ ರಾಮಕೃಷ್ಣ, ಬಸವರಾಜಪಾಟೀಲ್ ಅವರು ಏಪ್ರಿಲ್ 2ರಂದು ನಿವೃತ್ತಿಯಾಗುತ್ತಿದ್ದು, ಇದರಿಂದ ತೆರವಾಗುವ ನಾಲ್ಕೂ ಸ್ಥಾನಗಳಿಗೆ ಮಾ.23ರಂದು ಮತದಾನ ನಡೆಯಲಿದೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ಬಾರಿ ಕೂಡ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಫಾರೂಕ್ ಸ್ಪರ್ಧಿಸಿ ಪರಾಭವಗೊಂಡಿದ್ದರು.
ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ರಾಜ್ಯಸಭೆಯ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ. ಅದೇ ರೀತಿ ಕಾಂಗ್ರೆಸ್ಗೂ ಕೂಡ ಮೂರನೇ ಅಭ್ಯರ್ಥಿ ಆಯ್ಕೆಗೆ ಬೇರೆ ಪಕ್ಷ ಇಲ್ಲವೇ ಪಕ್ಷೇತರ ಶಾಸಕರ ಬೆಂಬಲ ಅನಿವಾರ್ಯವಾಗಿದೆ. ಹೀಗಾಗಿ ಪಕ್ಷೇತರ ಶಾಸಕರಿಗೆ ಎಲ್ಲಿಲ್ಲದ ಬೇಡಿಕೆ ಈ ಚುನಾವಣೆಯಲ್ಲಿ ಉಂಟಾಗಿದೆ.
ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಎರಡು ರಾಜ್ಯಸಭೆ ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ. ಬಿಜೆಪಿಗೂ ಕೂಡ ಒಂದು ಸ್ಥಾನವನ್ನು ಗೆಲ್ಲಲು ಕಷ್ಟವಾಗುವುದಿಲ್ಲ.
ಬಿಜೆಪಿ ಅಭ್ಯರ್ಥಿಯಾದ ರಾಜೀವ್ಚಂದ್ರಶೇಖರ್ ಅವರಿಗೆ ಸೂಚಕರಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ಶೆಟ್ಟರ್, ಆರ್.ಅಶೋಕ್, ಅರವಿಂದಲಿಂಬಾವಳಿ, ಯು.ಬಿ.ಬಣಾಕಾರ್, ಬಿ.ಎನ್.ವಿಜಯ್ಕುಮಾರ್, ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಸಂಯ್ಪಾಟೀಲ್, ಅಶ್ವತ್ಥನಾರಾಯಣ್ ಅವರು ಸಹಿ ಹಾಕಿದರು.
ಇನ್ನು ಕಾಂಗ್ರೆಸ್ ಪಕ್ಷದ ಪರವಾಗಿ ತಲಾ 10 ಶಾಸಕರು ಸೂಚಕರಾಗಿ ಸಹಿ ಹಾಕಿದರು.