ಬೆಂಗಳೂರು,ಮಾ.12-ನಡೆದುಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು 50 ಗ್ರಾಂ ಸರ ಎಗರಿಸಿರುವ ಘಟನೆ ಗಿರಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಕೆರೆಹಳ್ಳಿಯ 6ನೇ ಮುಖ್ಯರಸ್ತೆಯಲ್ಲಿ ರತ್ನಮ್ಮ (53) ಎಂಬುವರು ರಾತ್ರಿ 8 ಗಂಟೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದರೋಡೆಕೋರರು ಇವರ ಕೊರಳಲಿದ್ದ 50 ಗ್ರಾಂ ಸರ ಎಗರಿಸಿ ಪರಾರಿಯಾಗಿದ್ದಾರೆ.
ಗಿರಿನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.